ಹೈಕಮಾಂಡ್ ಚಿತ್ತ ಕರ್ನಾಟಕದತ್ತ, ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ

ಬೆಂಗಳೂರು,ಡಿ.6- ಒಂದು ವೇಳೆ ಮತದಾನೋತ್ತರ ಸಮೀಕ್ಷೆಯಂತೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಭಾರೀ ಬಹುಮತದಿಂದ ಅಧಿಕಾರ ಗದ್ದುಗೆ ಉಳಿಸಿಕೊಂಡರೆ ಕರ್ನಾಟಕದಲ್ಲಿ ಮಹತ್ವದ ಬದಲಾವಣೆಯಾಗುವ ಸಂಭವವಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಅನುಸರಿಸಿದ ಮಾದರಿಯನ್ನೇ ಕರ್ನಾಟಕದಲ್ಲೂ ಅಳವಡಿಸಿಕೊಳ್ಳಲು ಬಿಜೆಪಿಯ ಥಿಂಕ್‍ಟ್ಯಾಂಕ್ ಮುಂದಾಗಿದೆ. ಪರಿಣಾಮ ಪಕ್ಷದೊಳಗೆ ಮಹತ್ವದ ಬದಾಲಾವಣೆಯಾಗಲಿದ್ದು, ಹಲವರಿಗೆ ನಡುಕ ಶುರುವಾಗಿದೆ. ಹಿಂದುತ್ವ-ಅಭಿವೃದ್ಧಿ ಅಂಜೆಂಡವೇ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿ ಹಾಗೂ ಹಿರಿಯರಿಗೆ ಕೋಕ್ ನೀಡುವ […]