ಪಿಎಫ್‌ಐ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು.ನ.30 : ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಲಭ್ಯವಾಗಬೇಕಿದೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ […]