ಹಿಜಾಬ್ ವಿವಾದ ; ಪ್ರತಿಭಟನೆ ನಡೆಸಿದ 58 ವಿದ್ಯಾರ್ಥಿಗಳ ಅಮಾನತು

ಬೆಂಗಳೂರು,ಫೆ.19- ರಾಜ್ಯಾದ್ಯಂತ ತೀವ್ರ ಸಂಘರ್ಷದ ಬಿರುಗಾಳಿಯನ್ನೇ ಎಬ್ಬಿಸಿರುವ ಹಿಜಾಬ್ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಹಿಜಾಬ್‍ಗೆ ಅವಕಾಶ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ಪಬ್ಲಿಕ್ ಶಾಲೆಯ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿನಿಯರು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಆದಾಗ್ಯೂ ಶಿಕ್ಷಕರ ಮಾತನ್ನು ಕ್ಕರಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ […]