ಹಿಜಾಬ್ ವಿವಾದ : ಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು,ಫೆ.16- ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ ಇಲ್ಲವೆ ಶಿಸ್ತುಕ್ರಮ ಎದುಸಬೇಕಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಸಂದೇಶ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಯಾರದೋ ಚಿತಾವಣೆಯಿಂದ ವಿದ್ಯಾರ್ಥಿನಿಯರು ವಿವಾದ ಮಾಡುತ್ತಿದ್ದಾರೆ. ಘಟನೆ ಸಂಬಂಧ ಇದುವರೆಗೂ ಮೃದುಧೋರಣೆ ತಳೆಯಲಾಗಿತ್ತು. ಇನ್ನು ಮುಂದೆ ಮುಲಾಜಿಲ್ಲದೆ ಕಾನೂನು ರೀತಿ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವರು ಕಠಿಣ ಎಚ್ಚರಿಕೆ ನೀಡಿದರು. ಕೋರ್ಟ್ ಆದೇಶ ಮತ್ತು […]