ಪ್ರಚೋದನಾಕಾರಿ ಹೇಳಿಕೆ ನೀಡದೆ ಶಾಂತಿ ಕಾಪಾಡಿ : ಸಿಎಂ ಮನವಿ

ಬೆಂಗಳೂರು,ಫೆ.10- ಶಾಲಾಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಧರಿಸುವ ಕುರಿತು ಉಂಟಾಗಿರುವ ವಿವಾದದ ಬಗ್ಗೆ ಇನ್ನು ಮುಂದೆ ಯಾರೊಬ್ಬರು ಪ್ರಚೋದನಕಾರಿ ಹೇಳಿಕೆ ನೀಡದೆ ಶಾಂತಿ-ಸೌಹಾರ್ದತೆ ಕಾಪಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈಗಾಗಲೇ ಪರವಿರೋಧವಾಗಿ ಎಲ್ಲರೂ ಹೇಳಿಕೆ ಕೊಟ್ಟಿದ್ದರಿಂದ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇನ್ನು ಮುಂದಾದರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವಿದ್ಯಾರ್ಥಿಗಳ ನಡುವೆ ಸಾಮರಸ್ಯ ಹಾಳು ಮಾಡುವುದು ಬೇಡ. ನಾವೆಲ್ಲರೂ ಶಾಂತಿ ಸೌಹಾರ್ದತೆ ಕಾಪಾಡೋಣ ಎಂದರು. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಹಿಜಾಬ್-ಕೇಸರಿ ಶಾಲು ವಿವಾದ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು,ಫೆ.9- ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ನಡುವೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು. ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಸೇರಿದಂತೆ ಮತ್ತಿತರರ ಜತೆ ಔಪಚಾರಿಕ ಸಭೆ ನಡೆಸಿದರು. ನಿನ್ನೆ ರಾಜ್ಯದ 18 […]

ಒಂದು ವಾರ ಶಾಲಾ-ಕಾಲೇಜು ಮುಚ್ಚಿ : ಡಿಕೆಶಿ ಸಲಹೆ

ಬೆಂಗಳೂರು,ಫೆ.8- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳನ್ನು ಒಂದು ವಾರಗಳ ಕಾಲ ಮುಚ್ಚಿಸಿ, ಪರಿಸ್ಥಿತಿ ತಿಳಿಯಾಗುವವರೆಗೂ ಆನ್‍ಲೈನ್ ತರಗತಿಗಳನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ಕಾಯಬೇಕು. ಸಮಾಜದಲ್ಲಿ ಶಾಂತಿ ಕಾಪಾಡಲು ಒಂದು ಕಠಿಣ ತೀರ್ಮಾನ ಕೈಗೊಳ್ಳಬೇಕು. ನಮ್ಮ ದೇಶವನ್ನು ಇಡೀ ವಿಶ್ವ ನೋಡುತ್ತಿದೆ. ಇಂತಹ ಗೊಂದಲ, ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದರು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು […]

ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳ ಕೈವಾಡವಿದೆ : ಆರಗ ಜ್ಞಾನೇಂದ್ರ

ತೀರ್ಥಹಳ್ಳಿ,ಫೆ.7- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಹಿಜಾಬ್ ಪ್ರಕರಣದಲ್ಲಿ ಕೆಲವು ಕಾಣದ ದುಷ್ಟಶಕ್ತಿಗಳ ಕೈವಾಡವಿದ್ದು, ಸರ್ಕಾರ ಇದರ ತನಿಖೆ ನಡೆಸುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ತಲ್ವಾರ್ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದರು ಎಂದರೆ ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಯಾರು ಕೂಡ ಇದನ್ನು ಉಲ್ಲಂಘನೆ ಮಾಡಬಾರದು. ಇಷ್ಟು ದೊಡ್ಡ […]

ಕಾಲೇಜುಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ: ಸಮವಸ್ತ್ರ ನೀತಿ ಜಾರಿಗೆ ಸಮಿತಿ ರಚನೆ

ಬೆಂಗಳೂರು,ಫೆ.4- ಪಿಯು ಕಾಲೇಜುಗ ಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ರಾಜ್ಯದಲ್ಲಿ ಬಿಸಿ-ಬಿಸಿ ಚರ್ಚೆಗೆ ಕಾರಣ ವಾಗಿದೆ. ಇದಕ್ಕೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕ ಸರ್ಕಾರ ಪಿಯುಸಿ ಕಾಲೇಜುಗಳಲ್ಲಿ ಸಮವಸ್ತ್ರ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ನ ಅರ್ಜಿ ವಿಚಾರಣೆಗೆಗಾಗಿ ಕಾಯಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನೀಡುವ ಆದೇಶದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಜಾರಿಗೊಳಿಸಲು ಸಮಿತಿ ರಚನೆ ಮಾಡಲಾಗುತ್ತದೆ. ಈ ಮೂಲಕ ಹಿಜಾಬ್, ಕೇಸರಿ […]