ಸಂಸತ್‍ನಲ್ಲಿ ಪ್ರತಿಧ್ವನಿಸಿದ ಕರ್ನಾಟಕದ ‘ಹಿಜಾಬ್’ ವಿವಾದ
ನವದೆಹಲಿ,ಫೆ.5-ಕರ್ನಾಟಕದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿರುವ ವಿದ್ಯಾರ್ಥಿಗಳು ಹಿಜಾಬ್-ಕೇಸರಿ ಶಾಲು ಧರಿಸಿ ಶಾಲೆಗೆ ಬರುತ್ತಿರುವ ಸಂಗತಿ ಇದೀಗ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಕಾಂಗ್ರೆಸ್, ಡಿಎಂಕೆ, ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳು ಸಂಸದರು ಆಡಳಿತಾರೂಢ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ವಿದ್ಯಾರ್ಥಿಗಳಿಗೆ ಜಾತಿ-ಧರ್ಮ ಯಾವುದೂ ಗೊತ್ತಿರುವುದಿಲ್ಲ. ಕೆಲವರು ಇಲ್ಲಿಯೂ ಕೂಡ ವಿಷದ ಬೀಜ ಬಿತ್ತಿದ್ದಾರೆ. ವಿದ್ಯಾದೇವತೆಯಾದ ಸರಸ್ವತಿ ಅವರಿಗೆ […]