ಈಗ ಪರೀಕ್ಷೆಗೆ ಗೈರಾದರೆ ಮತ್ತೆ ಅವಕಾಶ ಕೊಡಲ್ಲ : ಶಿಕ್ಷಣ ಇಲಾಖೆ ಸ್ಪಷ್ಟ ಸೂಚನೆ

ಬೆಂಗಳೂರು,ಫೆ.20- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರಾದರೆ ಮತ್ತೆ ಪರೀಕ್ಷೆ ಬರೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ. ಕಳೆದ ಹಲವು ದಿನಗಳಿಂದ ಹಿಜಾಬ್ ವಿವಾದ ಮುಂದುವರೆದಿದ್ದು, ಹಲವೆಡೆ ವಿದ್ಯಾರ್ಥಿನಿಯರು ಹಿಜಾಬ್‍ಗಾಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸಿ ಕಾಲೇಜುಗಳಿಗೆ ಗೈರುಹಾಜರಾಗುತ್ತಿದ್ದಾರೆ. ಈ ನಡುವೆ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಿದ್ದು, ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗದಿದ್ದರೆ ಮತ್ತೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿರುವುದರಿಂದ ಹಿಜಾಬ್‍ಗಾಗಿ ಪಟ್ಟು […]