ಮನೆಗೆ ಬೆಂಕಿ ಹಚ್ಚಿ ಮೈ ಕಾಯಿಸಿಕೊಳ್ಳುತ್ತಿದೆ ಕಾಂಗ್ರೆಸ್ : ಬಿಜೆಪಿ ವಾಗ್ದಾಳಿ
ಬೆಂಗಳೂರು,ಫೆ.8- ಹಿಜಾಬ್-ಕೇಸರಿ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ನೆರೆಮನೆಗೆ ಬೆಂಕಿ ಬಿದ್ದಾಗ ಮೈ ಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಿಜಾಬ್ ಪ್ರಕರಣದಲ್ಲಿ ಕಾಂಗ್ರೆಸ್‍ನವರ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಅದರ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು ಎಂದು ಎಚ್ಚರಿಸಿದೆ. ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್‍ನಿಂದ ಎದುರಿಸುವ […]