ಹಿಮಾಚಲ ಸಿಎಂ ಆಯ್ಕೆ ಜವಾಬ್ದಾರಿ ಪ್ರಿಯಾಂಕ ಹೆಗಲಿಗೆ

ಸೀಮ್ಲಾ,ಡಿ.10- ತಮ್ಮ ರಾಜಕೀಯ ಜೀವನದ ಹಾದಿಯಲ್ಲಿ ಮೊದಲ ಬಾರಿಗೆ ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸಿನತ್ತ ಮುಖ ಮಾಡಿರುವ ಪ್ರಿಯಾಂಕ ಗಾಂಧಿ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲೂ ನಿರ್ಣಾಯಕರಾಗಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ 40 ಮಂದಿ ಚುನಾಯಿತ ಪ್ರತಿನಿಧಿಗಳು ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ಒಂದು ಸಾಲಿನ ನಿರ್ಣಯಕ್ಕೆ ಸರ್ವಸಮ್ಮತಿ ಸೂಚಿಸಿದ್ದಾರೆ. ಅಂತಿಮವಾಗಿ ಬೆಟ್ಟಗುಡ್ಡಗಳ ನಾಡು ಹಿಮಾಚಲಪ್ರದೇಶದ ಮುಖ್ಯಮಂತ್ರಿಯ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ರವಾನೆಯಾಗಿದೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪ್ರಿಯಾಂಕ ಗಾಂಧಿ […]
ಹಿಮಾಚಲ ಗೆದ್ದ ಕಾಂಗ್ರೆಸ್ : ಸಿಎಂ ಆಯ್ಕೆ ಗೊಂದಲದ ನಡುವೆ ಆಪರೇಷನ್ ಭಯ

ಶಿಮ್ಲಾ,ಡಿ.9-ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಗೊಂದಲಕ್ಕೊಳಗಾಗಿದ್ದು, ಮತ್ತೊಂದೆಡೆ ಬಿಜೆಪಿಯ ಆಪರೇಷನ್ ಕಮಲದ ಭಯದಿಂದ ನಿದ್ದೆಗೆಡುವಂತಾಗಿದೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಹುದ್ದೆಯ ಮೇಲೆ ಪ್ರಮುಖ ನಾಲ್ವರು ನಾಯಕರು ಕಣ್ಣಿಟ್ಟಿದ್ದು , ಸರ್ವಸಮ್ಮತ ಅಭ್ಯರ್ಥಿಯ ಆಯ್ಕೆ ಸವಾಲನ್ನು ಸೃಷ್ಟಿಸಿದೆ. ಇಂದು ಸಂಜೆ ಶಿಮ್ಲಾದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಾಜೀವ್ ಶುಕ್ಲ, ಛತ್ತೀಸ್‍ಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಹಿರಿಯ […]
ಬಿಜೆಪಿ ಸೇರಿದ ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ
ನವದೆಹಲಿ, ಸೆ 28- ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ ನಿಧನರಾದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ನಿಕಟವರ್ತಿಯಾಗಿದ್ದ ಮಹಾಜನ್ ಮಾಜಿ ಸಚಿವರು ಆಗಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ದೆಹಲಿಯಲ್ಲಿರುವಂತೆ ಮಾ- ಬೇಟಾ ಹಿಡಿತ ಹೆಚ್ಚಾಗಿದೆ. ವಿರೋಧ ಪಕ್ಷವು ದೃಷ್ಟಿಹೀನ, ದಿಕ್ಕಿಲ್ಲದ ನಾಯಕತ್ವದ ಪಕ್ಷವಾಗಿದೆ ಎಂದು ಕಿಡಿಕಾರಿದ್ದಾರೆ. ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. […]
ಟೆಂಪೋ ಕಮರಿಗೆ ಉರುಳಿ ಬಿದ್ದು 7 ಪ್ರವಾಸಿಗರ ಸಾವು

ಶಿಮ್ಲಾ, ಸೆ.26 – ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 10 ಮಂದಿ ಗಾಯ ಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆ ಯಲ್ಲಿ ನಡೆದಿದೆ. ಮೃತಪಟ್ಟವರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದವರಾಗಿದ್ದಾರೆ. ಬಂಜಾರ್ ಉಪವಿಭಾಗದ ಘಿಘಿ ಬಳಿ ಸ್ಥಳೀಯರು ಅಪಘಾತ ನೋಡಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಕತ್ತಲಾಗಿದ್ದ ಕಾರಣ ಪರಿಹಾರ ಕಾರ್ಯಕ್ಕೆ ಅಡಚಣೆ ಉಂಟಾದರೂ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮೊದಲು ಬಂಜಾರ್ ಆಸ್ಪತ್ರೆಗೆ […]