ಕರ್ನಾಟಕ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ : ಹಿಮಂತ ಬಿಸ್ವ ಶರ್ಮ

ಬೆಂಗಳೂರು,ಮಾ.14- ಕರ್ನಾಟಕದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿಜಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಅವರು ತಿಳಿಸಿದರು. ಇಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತಕ್ಷೇತ್ರದ ಕುರುಗೋಡಿನಲ್ಲಿ ರೋಡ್ ಷೋದಲ್ಲಿ ಅವರು ಮಾತನಾಡಿದರು. ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಸಾಗಲು ಡಬಲ್ ಎಂಜಿನ್ ಸರಕಾರ ಅಗತ್ಯ. ಈಚೆಗೆ ನಡೆದ ಗುಜರಾತ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. […]