ಹಿಂದಿ ದಿವಸ್ ಆಚರಣೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು,ಸೆ.14- ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ಯನ್ನು ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದವು. ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲಿ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ಇಂದು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಗೌಡ, ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಚನೆಯಾಗಿರುವ ರಾಜ್ಯಗಳ ಒಕ್ಕೂಟವಾಗಿ ಭಾರತ ದೇಶವಾಗಿದೆ. ಆಡಳಿತ ನಡೆಸುವ […]