ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿಂದೆ ಅನೇಕ ಸಂಘಟನೆಗಳ ಕೈವಾಡ

ಬೆಂಗಳೂರು,ಫೆ.23- ಶಿವಮೊಗ್ಗ ಭಜರಂಗದಳದ ಕಾರ್ಯ ಕರ್ತ ಹರ್ಷ ಕಗ್ಗೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡವಿರುವ ಶಂಕೆಯಿದ್ದು, ಬಂಧಕ್ಕೊಳಗಾಗಿರುವ ಆರೋಪಿಗಳಿಗೆ ಯಾರ ಸಂಪರ್ಕವಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧನದಲ್ಲಿರುವ ಆರೋಪಿಗಳಿಗೆ ಯಾರ ಜೊತೆ ಸಂಪರ್ಕವಿದೆ? ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದರು. ಸದ್ಯ ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. […]