ಪ.ಜಾ, ಪ.ಪಂ ಮೀಸಲಾತಿ ಹೆಚ್ಚಳ ಒಂದು ಐತಿಹಾಸಿಕ ನಿರ್ಧಾರ : ಸಿಎಂ

ಬೆಂಗಳೂರು,ಫೆ.24- ಅನೇಕ ಸವಾಲುಗಳ ನಡುವೆಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದು ಒಂದು ಐತಿಹಾಸಿಕ ನಿರ್ಧಾರ. ಬರುವ ದಿನಗಳಲ್ಲಿ ಇದರ ಲಾಭ ಆ ಸಮುದಾಯಕ್ಕೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 15ನೇ ವಿಧಾನಸಭೆಯ ಕೊನೆಯ ದಿನವಾದ ಹಿನ್ನಲೆಯಲ್ಲಿ ಮಾತನಾಡಿದ ಬೊಮ್ಮಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದು ಐತಿಹಾಸಿಕ ನಿರ್ಣಯ. ಇದಕ್ಕಾಗಿ ನಮ್ಮ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಮುಂದೊಂದು ದಿನ ಬೇರೆ ರಾಜ್ಯಗಳು ಇದನ್ನು […]