ಸದ್ಯಕ್ಕೆ ಶಾಲೆಗಳನ್ನು ಮುಚ್ಚುವುದೇ ಸೂಕ್ತ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕೆ

ಬೆಂಗಳೂರು, ಜ.22- ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಒತ್ತಡಕ್ಕೆ ಮಣಿದು ವಾರಾಂತ್ಯ ಕರ್ಫ್ಯೂವನ್ನು ಸರ್ಕಾರ ರದ್ದುಪಡಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದರು. ಕೋವಿಡ್ ಮೂರನೆ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಶೀತ, ಕೆಮ್ಮು, ಜ್ವರದಿಂದ ಜನರು ಬಳಲುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಸರ್ಕಾರ ವಾಪಸ್ ಪಡೆದಿದೆ. ಇದರಿಂದ ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಉಂಟಾಗಲಿದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ […]