ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ

ಹುಬ್ಬಳ್ಳಿ,ಡಿ.2- ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕನೊಬ್ಬ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರು ಕೊಡಲು ಬಂದಿದ್ದ ಯುವಕನ ಮೆಲೆಯೇ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತನಿಖೆಗೆ ಸೂಚಿಸಿದ್ದೇನೆ. ಒಂದು ವೇಳೆ ಪೊಲೀಸರು ಯುವಕನ ಮೇಲೆ […]

ಮಲ್ಲೇಶ್ವರಂನಲ್ಲಿ ಗಂಧರ್ವಲೋಕ ಸೃಷ್ಟಿ : ನಡುರಾತ್ರಿ ಸಿಎಂ ಧ್ವಜಾರೋಹಣ

ಬೆಂಗಳೂರು, ಆ.15- ವೇದಿಕೆಯ ಮೇಲೆಲ್ಲ ತಿರಂಗದ ಝಗಮಗ ಬಣ್ಣಗಳ ಬಳುಕು, ಸಭಾಂಗಣದಲ್ಲಿ ನೆರೆದಿದ್ದವರ ಕೈಯಲ್ಲಿ ಅರಳಿದ್ದ ರಾಷ್ಟ್ರಧ್ವಜಗಳು, ಶಾಸ್ತ್ರೀಯ ನೃತ್ಯ ಮತ್ತು ಸಂಗೀತಗಳ ಹದವಾದ ಸಮ್ಮಿಲನದಲ್ಲಿ ತಾಯಿ ಭಾರತಾಂಬೆಯ ಸ್ತುತಿ, ಬಳಿಕ ಸಮಕಾಲೀನ ಚಿತ್ರಗೀತೆಗಳ ಮೂಲಕ ಜನರಲ್ಲಿ ಉತ್ಸಾಹದ ಅಲೆ ಎಬ್ಬಿಸಿದ ಹೆಸರಾಂತ ಗಾಯಕಿ ಮಂಗ್ಲಿ (ಸತ್ಯವತಿ) ಮತ್ತು ಅವರ ತಂಗಿ ಇಂದಿರಾವತಿ, ಇವೆಲ್ಲಕ್ಕೆ ಕಳಶವಿಟ್ಟಂತೆ ನಟ್ಟ ನಡುರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ಮಾಡಿದರು. ಇವು ಡಾ.ಸಿ ಎನ್ ಅಶ್ವತ್ಥ […]

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಕಡಬ,ಆ.15- ಧ್ವಜಾರೋಹಣ ಸಂದರ್ಭದಲ್ಲಿ ನಿವೃತ್ತ ಯೋಧ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮದ ಹಳೇ ಸ್ಟೇಷನ್ ಅಮೃತಸರೋವರದ ಬಳಿ ಇಂದು ಬೆಳಗ್ಗೆ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಏಕಾಏಕಿ ನಿವೃತ್ತಯೋಧ ಗಂಗಾಧರ ಗೌಡ ಎಂಬುವರು ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ನಿವೃತ್ತ ಯೋಧ ಗಂಗಾಧರ ಗೌಡ ಅವರ ನಿಧನದಿಂದ ಕುಟ್ರುಪಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.