ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

ಚೆನ್ನೈ.ಫೆ.3-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ ,ತಿರುವರೂರು, ನಾಗಪಟ್ಟಣಂ ಜಿಲ್ಲೆ ದೇರಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೇರಳ ಭಾಗದಲ್ಲಿ 64.5 ಮಿಮೀ-115.5 ಮಿಮೀ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಪುದುಚೇರಿಯಾದ್ಯಂತ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಖ್ಯಾತ ಹಿರಿಯ ನಟ ಕಾಸಿನಾಧುನಿ […]
ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ
ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ ರಜೆ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ […]
ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ, ಶಾಲಾ-ಕಾಲೇಜಿಗೆ ರಜೆ
ಬೆಳಗಾವಿ,ಆ.22- ನಗರದಲ್ಲಿ ಕೆಲ ದಿನಗಳ ಹಿಂದೆ ಪ್ರತ್ಯಕ್ಷವಾಗಿ ನಂತರ ನಾಪತ್ತೆಯಾಗಿದ್ದ ಚಿರತೆ ಇಂದು ಬೆಳ್ಳಂಬೆಳಗ್ಗೆ ಮತ್ತೆ ಕಾಣಿಸಿಕೊಂಡಿದ್ದು, ಜನರ ನಿದ್ದೆಗೆಡಿಸಿದೆ. ಕಳೆದ ಆ.5ರಂದು ಜಾದವ್ ನಗರದಲ್ಲಿ ಚಿರತೆ ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಿ ಗಾಲ್ ಮೈದಾನದಲ್ಲಿ ಅಡಗಿ ಕುಳಿತಿತ್ತು. ಅರಣ್ಯ ಇಲಾಖೆ ಚಿರತೆ ಸೆರೆಗಾಗಿ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಆದರೆ, ಆಗೊಮ್ಮೆ ಹೀಗೊಮ್ಮೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಆದರೆ, ಇಂದು ಬೆಳ್ಳಂಬೆಳಗ್ಗೆ ಹಿಂಡಲಗ ವಿದ್ಯಾಮಂದಿರ ಬಳಿಯ ಡಬ್ಬಲ್ ರಸ್ತೆಯಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿರುವುದನ್ನು […]
ಬೆಳಗಾವಿ ಜಿಲ್ಲೆಯಲ್ಲಿ ಚಿರತೆಗಳ ಭಯ, 52 ಶಾಲೆಗಳಿಗೆ ರಜೆ
ಬೆಳಗಾವಿ,ಆ.12- ಜಿಲ್ಲೆಯಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಮುಂಜಾಗ್ರತಾ ಕ್ರಮವಾಗಿ 52 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಕಳೆದ 5ರಂದು ಜಾದವ್‍ನಗರದಲ್ಲಿ ಒಂದು ಚಿರತೆ ಪತ್ತೆಯಾಗಿತ್ತು, ಗಾಲ್ ಮೈದಾನದಲ್ಲಿ ಮತ್ತೊಂದು ಚಿರತೆ ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನಗರದ 22 ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದ್ದು, ಇಂದು ಕೂಡ ಮುಂದುವರೆಸಲಾಗಿದೆ. ಮೂಡಲಗಿ ತಾಲ್ಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಶಿವಾಪುರ್, ಮಸಗುಪ್ಪೆ ಗ್ರಾಮದ 30 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. […]
ವರುಣನ ರೌದ್ರತೆ, ತೀರದ ಸಂಕಷ್ಟ, ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು,ಜು.15- ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸ ತೊಡಗಿದೆ. ಕರಾವಳಿ, ಮಳೆನಾಡು ಭಾಗದಲ್ಲಿ ಮಳೆಯಿಂದ ಭಾರೀ ಪ್ರಮಾಣದ ಹಾನಿಯುಂಟಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗಾವಿ, ರಾಯಚೂರು,ಬೀದರ್‍ನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಬೀದರ್ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಮನೆ , ಜಮೀನು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೃಷ್ಣಾ ನದಿ ಮತ್ತೊಂದೆಡೆ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ತುಂಗಭದ್ರ […]