ದೇಶದಲ್ಲಿ ಒಳ್ಳೆಯವರಿಗೆ ಉಳಿಗಾಲವಿಲ್ಲ: ಕೇಜ್ರಿವಾಲ್

ನವದೆಹಲಿ,ಮಾ.8-ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಬಂಧಿಸಲಾಗುತ್ತಿದೆ. ಆದರೆ, ಲೂಟಿ ಮಾಡುವವರು ಬಂಧನದಿಂದ ಪಾರಾಗುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಒಳಿತಿಗಾಗಿ ಒಂದು ದಿನದ ಪೂಜೆ ಪ್ರಾರಂಭಿಸಿರುವ ಕೇಜ್ರಿವಾಲ್ ಅವರು ಇಂದು ರಾಜ್‍ಘಾಟ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಶ್ರದ್ದಾಂಜಲಿ ಸಲ್ಲಿಸಿದ ನಂತರ ಅವರು ಮಾತನಾಡಿದರು. ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರುಗಳು ತಮ್ಮ ಕಠಿಣ ಪರಿಶ್ರಮದಿಂದ ್ತ ಬಡವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯವನ್ನು ಖಾತ್ರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು […]