ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕಾವಿಡ್ ಮಾರ್ಗಸೂಚಿ ಉಲ್ಲಂಘನೆ : ಗೃಹಸಚಿವ ಜ್ಞಾನೇಂದ್ರ

ಬೆಂಗಳೂರು,ಜ.9- ಪಾದಯಾತ್ರೆ ಸಂದರ್ಭದಲ್ಲಿ ನಾವು ಮಾರ್ಗಸೂಚಿಗಳನ್ನು ಪಾಲನೆ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ನಾಯಕರು ಈಗ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹೆಚ್ಚಾಗುತ್ತಿರುವ ಕಾರಣ ನಾವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೆವು. ಪ್ರಾರಂಭದಲ್ಲಿ ಪಾಲನೆ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡರು ಈಗ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಕಿಡಿಕಾರಿದರು. ಇಡೀ ರಾಜ್ಯಕ್ಕೆ ವೀಕೆಂಡ್ ಕಫ್ರ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೊಂದು ಕಾನೂನು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ. ಎಲ್ಲರಿಗೂ ಒಂದೇ […]