ಸಿಎಂ ಹಾಗೂ ಗೃಹ ಸಚಿವರ ನಿವಾಸಕ್ಕೆ ನುಗ್ಗಲೆತ್ನಿಸಿದ ಎಬಿವಿಪಿ ಕಾರ್ಯಕರ್ತರು, ಲಘು ಲಾಠಿ ಪ್ರಹಾರ

ಬೆಂಗಳೂರು,ಜು.30- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮೂರು ದಿನಗಳ ಹಿಂದೆ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್‍ನೆಟ್ಟಾರು ಕೊಲೆ ಪ್ರಕರಣದ ಬಿಸಿ ಇದೀಗ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ತಟ್ಟಿದ್ದು, ಬಿಜೆಪಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ.ಮೂರು ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾದ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರಾದ ಸುನೀಲ್‍ಕುಮಾರ್ ಅಂಗಾರ ಸೇರಿದಂತೆ ವಿವಿಧ ಮುಖಂಡರಿಗೆ ಬಿಸಿ ಮುಟ್ಟಿಸಿದ್ದ ಆರ್‍ಎಸ್‍ಎಸ್‍ನ ಅಂಗ ಸಂಸ್ಥೆಗಳು, ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ […]