ರಾಷ್ಟ್ರೀಯ ಪಕ್ಷವಾದ ಅಮ್ ಆದ್ಮಿ ಪಾರ್ಟಿ

ನವದೆಹಲಿ,ಡಿ.8- ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿರುವ […]