ಹೆಲ್ಮೆಟ್ ಹಿಡಿಯಲು ಹೋಗಿ ಕೆರೆಗೆ ಬಿದ್ದು ಯುವಕ ಸಾವು
ಶೆಡ್ ಮೇಲೆ ಗೋಡೌನ್ ಗೋಡೆ ಕುಸಿದು ನಾಲ್ವರ ಸಾವು
ಹೊಸಕೋಟೆ,ಜು.21- ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಮೇಲೆ ವೇರ್ಹೌಸ್ನ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಮೂಲತಃ ಬಿಹಾರದ ಮನೋಜ್ಕುಮಾರ್ ಸದಯ್ (35), ರಾಮಕ್ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದೆಯ (22) ಹಾಗೂ ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ನಿರ್ಮಾಣ ಹಂತದ ಸೌಪರ್ಣಿಕಾ ಬಹುಮಹಡಿ ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ತಂಗಲು ತಾತ್ಕಾಲಿಕ ಶೆಡ್ ನಿರ್ಮಿಸಲಾಗಿತ್ತು. […]