ಹೊಸಕೋಟೆ ಕಾಂಗ್ರೆಸ್‍ನಲ್ಲಿ ಶಾಸಕರ ವಿರುದ್ಧ ಅಸಮಾಧಾನ ಸ್ಪೋಟ

ಹೊಸಕೋಟೆ,ಡಿ.9- ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಮೂಲ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಕಾರ್ಯವೈಖರಿ ಕುರಿತು ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ. ಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚೀಮಡಂಹಳ್ಳಿ ಮುನಿಶಾಮಯ್ಯ ಅವರನ್ನು ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡು, ಶಾಸಕರು ನಮ್ಮನ್ನು ಕಡೆಗಣಿಸಲು ನೀವೇ ಕಾರಣ. ಸ್ಥಾನಮಾನಗಳನ್ನು ನೀಡುವಾಗ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ […]