“ಬೆಂಗಳೂರಿನಲ್ಲಿ ವಸತಿ ಯೋಜನೆಗೆ ಭೂಮಿ ಒದಗಿಸಲು ಸಿದ್ದ”

ಬೆಂಗಳೂರು,ಮಾ.7-ರಾಜಧಾನಿ ಬೆಂಗಳೂರಿನಲ್ಲಿ ಎಷ್ಟು ಬೇಕಾದರೂ ಅಷ್ಟು ಭೂಮಿಯನ್ನು ಒದಗಿಸಲು ನಮ್ಮ ಇಲಾಖೆ ಸಿದ್ದವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು. ಶಾಸಕ ಮಂಜುನಾಥ್.ಆರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಸತಿ ಯೋಜನೆಗಳನ್ನು ಆರಂಭಿಸಿದರೆ ಕಂದಾಯ ಇಲಾಖೆ ಎಷ್ಟು ಬೇಕಾದರೂ ಜಮೀನು ಕೊಡಲು ಸಿದ್ದವಿದೆ. ಪ್ರತಿಯೊಬ್ಬರಿಗೂ ಸೂರು ಒದಗಿಸಿಕೊಡಲು ನಮ್ಮ ಸರ್ಕಾರ ಬದ್ದವಿದೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲ್ಲೂಕು ಯಶವಂತಪುರ ಕೆರೆಗುಡ್ಡದಹಳ್ಳಿ ಗ್ರಾಮದಲ್ಲಿ ಶಿಕ್ಷಣ ಸಂಸ್ಥೆಗೆ ನೀಡಿದ್ದ 6.14 ಗುಂಟೆ ಜಮೀನನ್ನು ಹಿಂಪಡೆಯುವ […]