1120 ದೈಹಿಕ ಶಿಕ್ಷಕರ ನೇಮಕಾತಿಗೆ ಪ್ರಸ್ತಾಪನೆ ಸಲ್ಲಿಸಲಾಗಿದೆ : ಬಿ.ಸಿ.ನಾಗೇಶ್

ಬೆಂಗಳೂರು,ಸೆ.19- ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಉಳಿದಂತೆ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ […]