19 ಐಎಎಸ್ ಅಧಿಕಾರಿಗಳ ವರ್ಗಾವಣೆ, ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ..!

ಬೆಂಗಳೂರು,ಜ.25-ಆಡಳಿತವರ್ಗಕ್ಕೆ ಮತ್ತೆ ಮೇಜರ್ ಸರ್ಜರಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಡಿಸೆಂಬರ್ ತಿಂಗಳ ಕೊನೆಯ ದಿನ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಆಡಳಿತ ವರ್ಗದಲ್ಲಿ ಭಾರೀ ಬದಲಾವಣೆ ಮಾಡಿದ್ದ ಮುಖ್ಯಮಂತ್ರಿಯವರು ಪುನಃ ಮತ್ತೆ ಸರ್ಜರಿ ನಡೆಸಿದ್ದಾರೆ. ವಿಶೇಷವೆಂದರೆ ನಿನ್ನೆಯಷ್ಟೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದ ಬೆನ್ನಲ್ಲೇ ಇದೀಗ ಆಡಳಿತದಲ್ಲೂ ಮಹತ್ವದ ಬದಲಾವಣೆ ಮಾಡಿದ್ದಾರೆ. ಇಂದು 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ […]