ವೋಟರ್ ಐಡಿ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ ಸಾಧ್ಯತೆ

ಬೆಂಗಳೂರು,ನ.29- ಮತದಾರರ ಪಟ್ಟಿ ಅಕ್ರಮ ಹಗರಣ ವ್ಯಾಪಕ ಸದ್ದು ಮಾಡುತ್ತಿದ್ದಂತೆ ಬಿಬಿಎಂಪಿಯಲ್ಲಿ ಆಯುಕ್ತರ ತಲೆ ದಂಡಕ್ಕೆ ಕ್ಷಣಗಣನೆಗಳು ಶುರುವಾಗಿವೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಿ ಸಮರ್ಥ ಅಧಿಕಾರಿಗಳನ್ನು ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬಿಬಿಎಂಪಿಯ ಅಪರ ಚುನಾವಣಾಧಿಕಾರಿಗಳಾಗಿರು ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದು, ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಯಶಸ್ವಿಯಾಗಿ ಅಧಿಕಾರ ನಡೆಸಿದ್ದ ಮಂಜುನಾಥ್, ಗೌರವ್‍ಗುಪ್ತ ಅಥವಾ ರಾಜೇಶ್ ಗೌಡ ಅವರಲ್ಲಿ ಒಬ್ಬರನ್ನು […]

ವೋಟರ್ ಐಡಿ ಹಗರಣ : ಹಣಕಾಸು ವಹಿವಾಟಿನ ಬಗ್ಗೆ ತನಿಖೆ ತೀವ್ರ

ಬೆಂಗಳೂರು, ನ.27-ಮತದಾರರ ಪಟ್ಟಿ ಅಕ್ರಮದಲ್ಲಿ ಈವರೆಗೂ 11 ಮಂದಿ ಬಂಧನವಾಗಿದ್ದು, ಪೊಲೀಸರು ಹಗರಣದಲ್ಲಿನ ಹಣಕಾಸು ವಹಿವಾಟಿನ ಬಗ್ಗೆ ಮಾಹಿತಿ ಕಲೆಹಾಕಲಾರಂಭಿಸಿದ್ದಾರೆ. ಚುನಾವಣಾ ಆಯೋಗದ ಉಸ್ತುವಾರಿಯಲ್ಲಿ ನಡೆಯುತ್ತಿರುವ ತನಿಖೆ ದಿನೇ ದಿನೇ ಗಂಭೀರತೆ ಪಡೆದುಕೊಳ್ಳುತ್ತಿದೆ. ಹಗರಣದಲ್ಲಿ ಪ್ರಮುಖವಾಗಿ ಕೇಳಿ ಬಂದ ಚಿಲುಮೆ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಿನ್ನೆ ಬಿಬಿಎಂಪಿ ನಾಲ್ಕು ಮಂದಿ ಚುನಾವಣಾಕಾರಿ(ಆರ್‍ಒ) ಮತ್ತು ಒಬ್ಬ ಮಧ್ಯವರ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಲುಮೆ ಸಂಸ್ಥೆ ತನ್ನ ಸಿಬ್ಬಂದಿಗಳಿಂದ ಮತದಾರರ ಮಾಹಿತಿ ಸಂಗ್ರಹಿಸಲು ಅನುಕೂಲ ಮಾಡಿಕೊಡುವ ಸಲುವಾಗಿ […]

ವೋಟರ್ ಡಾಟಾ ಹಗರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ : ಸಿಎಂ

ಬೆಂಗಳೂರು,ನ.26- ಮತದಾರರಗುರುತಿನ ಚೀಟಿ ಪರಿಷ್ಕರಣೆ ಪ್ರಕರಣದಲ್ಲಿ ಯಾವುದೇ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಐಎಎಸ್ ಇರಲಿ ಅಥವಾ ಇನ್ಯಾವುದೇ ಅಧಿಕಾರಿ ಇರಲಿ ಕಾನೂನು ಮುಂದೆ ಎಲ್ಲರೂ ಒಂದೇ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಚುನಾವಣಾ […]

ಬಿಬಿಎಂಪಿ ಆಂತರಿಕ ತನಿಖೆಯಲ್ಲೂ ಬಯಲಾಯ್ತು ‘ಚಿಲುಮೆ’ ಅಕ್ರಮ

ಬೆಂಗಳೂರು,ನ.26- ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಗಳು ಬಿಬಿಎಂಪಿ ನಡೆಸಿದ ಆಂತರಿಕ ತನಿಖೆಯಲ್ಲೂ ಸ್ಪಷ್ಟವಾಗಿದೆ. ತನಿಖೆ ನಡೆಸಿದ ಬಿಬಿಎಂಪಿ ಹಿರಿಯ ಅಧಿಕಾರಿಗಳು ಬಿಎಲ್‍ಓಗಳು ನೀಡಿದ ಉತ್ತರ ಕೇಳಿ ಶಾಕ್ ಆಗಿದ್ದಾರೆ. ಅದೇನು ಅಂದರೆ ನೀವೂ ಬೆಚ್ಚಿ ಬೀಳೋದು ಗ್ಯಾರಂಟಿ. ಅದೇನು ಅಂತೀರಾ… ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಚಿಲುಮೆ ಸಂಸ್ಥೆಯವರು ಎಸಿ ರೂಮಿನಲ್ಲಿ ಕುಳಿತುಕೊಂಡೇ ಮಾಡುತ್ತಿದ್ದರಂತೆ. ಅದರಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಕ್ಷಣ ಮಾತ್ರದಲ್ಲಿ ಆಗುತ್ತಿತ್ತು. ಕೇವಲ ಒಂದು ಬಟನ್ ಒತ್ತುವ ಮೂಲಕ ಮತದಾರರ ಹೆಸರುಗಳನ್ನು ಕ್ಷಣ ಮಾತ್ರದಲ್ಲಿ […]

ವೋಟರ್ ಡೇಟಾ ಅಕ್ರಮ ನಡೆದಿಲ್ಲ ಎಂದಾದರೆ IAS ಅಧಿಕಾರಿಗಳ ಅಮಾನತಾಗಿದ್ದೇಕೆ..?

ಬೆಂಗಳೂರು, ನ.26- ಮತದಾರರ ಪಟ್ಟಿಯಲ್ಲಿ ಅಕ್ರಮಗಳೇ ನಡೆದಿದ್ದ ಎಂದು ವಾದಿಸುತ್ತಿದ್ದ ಮುಖ್ಯಮಂತ್ರಿಯವರೆ, ಹಾಗಿದ್ದರೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು ಯಾಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಮತದಾರರ ಪಟ್ಟಿ ಅಕ್ರಮಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹಾಸ್ಯಾಸ್ಪದವಾಗಿವೆ. ಮೊದಲು ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸಲಾಗುತ್ತದೆ. ಹಗರಣ ಹೊರಬಂದನಂತರ ಇದೊಂದು ಸಣ್ಣ ಲೋಪ ಎಂಬಂತೆ ಮಾತಾಡುತ್ತದೆ. ಹಗರಣದ ತೀವ್ರತೆ ಹೊರಬಂದಾಗ ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುತ್ತದೆ. ಪಿಎಸ್‍ಐ […]

ವೋಟರ್ ಐಡಿ ಹಗರಣ : ಕೇಂದ್ರ ಚುನಾವಣಾ ಆಯೋಗದಿಂದ ಪರಿಶೀಲನೆ

ಬೆಂಗಳೂರು,ನ.24- ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿರುವ ಚಿಲುಮೆ ಸಂಸ್ಥೆ ಹಗರಣ ಕೇಂದ್ರ ಚುನಾವಣಾ ಆಯೋಗದ ನಿದ್ದೆಗೆಡಿಸಿದೆ. ಚಿಲುಮೆ ಸಂಸ್ಥೆ ವಿರುದ್ಧ ಕೇಳಿ ಬಂದಿರುವ ಆರೋಪದ ಹಿನ್ನಲೆಯಲ್ಲಿ ಪ್ರಕರಣದ ಜಾಡು ಪತ್ತೆ ಹಚ್ಚಲು ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತರು ನಗರಕ್ಕೆ ಆಗಮಿಸಿದ್ದಾರೆ. ನಗರದಲ್ಲಿ ಬೀಡುಬಿಟ್ಟಿರುವ ಉಪ ಆಯುಕ್ತರು ಇಂದು ನಗರದ 28 ಕ್ಷೇತ್ರಗಳ ಮತದಾರರನೋಂದಣಿ ಅಧಿಕಾರಿಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಳೆದ ಜ.1ರಿಂದ ಇಲ್ಲಿಯವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಮತ್ತು ತೆಗೆದು […]

ವೋಟರ್ ಐಡಿ ಹಗರಣ : ಸಾಫ್ಟ್ ವೇರ್ ಎಂಜಿನಿಯರ್ ವಶಕ್ಕೆ

ಬೆಂಗಳೂರು,ನ.20- ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಕುರಿತಂತೆ ಕೇಂದ್ರ ವಿಭಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ಡಿಜಿಟಲ್ ಆ್ಯಪ್ ಸೃಷ್ಟಿಸಿದ್ದ ಪ್ರಮುಖ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಮೀಕ್ಷಾ ಆ್ಯಪ್ ಸೃಷ್ಟಿಸಿದ್ದ ಈತ ಪ್ರಮುಖ ಸಾಫ್ಟ್‍ವೇರ್ ಡೆವಲಪರ್ ಎಂದು ಪೊಲೀಸರು ತಿಳಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಈತ ಯಾವ ಯಾವ ಕ್ಷೇತ್ರಗಳಲ್ಲಿ ಬದಲಾವಣೆ ಮಾಡಿದ್ದಾರೆ ಮತ್ತು ಈ ಆ್ಯಪ್‍ನ ಉದ್ದೇಶ ಮತ್ತು ಅಕ್ರಮಗಳ ಕುರಿತಂತೆ ವ್ಯಾಪಕ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಮತದಾರರ ಪಟ್ಟಿ ಗೋಲ್‍ಮಾಲ್ : ಬಿಜೆಪಿ ಹೈ ಕಮಾಂಡ್ ಆಕ್ರೋಶ

ಬೆಂಗಳೂರು,ನ.19-ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ ಕುರಿತು ವರದಿ ನೀಡಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲು ಕೆಲವೇ ದಿನಗಳು ಬಾಕಿ ಇರುವಾಗ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಅಮ್ ಆದ್ಮಿ ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮೇಲೆ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ದೆಹಲಿ ನಾಯಕರು ವರದಿ ನೀಡಲು ಸೂಚಿಸಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ […]