ಪ್ರತಿಭಟನೆ ವೈಚಾರಿಕವಾಗಿರಲಿ, ಶಾಂತಿ ಕಾಪಾಡಿ : ಸಿಎಂ ಬೊಮ್ಮಾಯಿ

ಬೆಂಗಳೂರು,ಆ.21-ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ ಜಿಲ್ಲೆಯ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸವನ್ನು ಯಾರು ಕೂಡ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು. ಯಾವುದೇ ವಿಚಾರದ ಬಗ್ಗೆ ವೈಚಾರಿಕತೆ ಇದ್ದರೆ ವೈಚಾರಿಕತೆಯಿಂದಲೇ ಪ್ರತಿಪಾದಿಸಬೇಕು, ವಿರೋಧಿಸುವುದಿದ್ದರೆ ವೈಚಾರಿತೆಯಿಂದಲೇ ವಿರೋಧಿಸಬೇಕು ಎಂದ ಅವರು, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಸಾರ್ವಕರ್ […]