ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ ಪ್ರತಿಷ್ಠಾಪನೆಗೆ ಪಟ್ಟು : ಹುಬ್ಬಳ್ಳಿ ಉದ್ವಿಗ್ನ

ಹುಬ್ಬಳ್ಳಿ, ಮಾ.9- ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾಮಣ್ಣ-ರತಿ ಮೂರ್ತಿ ಪ್ರತಿಷ್ಠಾಪಿಸಿ ಹೋಳಿ ಹಬ್ಬಕ್ಕೂ ಅವಕಾಶ ನೀಡಬೇಕು ಎಂದು ನಗರದ ವಿವಿಧ ಸಂಘ-ಸಂಸ್ಥೆಗಳು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ, ಮೇಯರ್‍ಗೆ ಮನವಿ ಸಲ್ಲಿಸಿ ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಮೇಯರ್ ಈರೇಶ ಅಂಚಟಗೇರಿ ಪಾಲಿಕೆ ಸಭಾ ನಾಯಕರು, ವಿರೋಧ ಪಕ್ಷದ […]

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ

ಬೆಂಗಳೂರು,ಜ.26- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ನಡೆದ 74ನೇ ಗಣರಾಜ್ಯೋತ್ಸವದಲ್ಲಿ ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಮುಂಜಾಗೃತಾ ಕ್ರಮವಾಗಿ ಮೈದಾನದ ಸುತ್ತ 4 ಎಸಿಪಿ, 10 ಇನ್ಸ್‍ಪೆಕ್ಟರ್‍ಗಳು, 40 ಎಸ್‍ಐಗಳು, 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರ ಜತೆಗೆ 6 ಕೆಎಸ್‍ಆರ್‍ಪಿ ತುಕಡಿಗಳನ್ನು ಕಾಯ್ದಿರಿಸಲಾಗಿತ್ತು.ಮೈದಾನದ ಸುತ್ತ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಬೃಹತ್ ಕಟ್ಟಡಗಳ ಮೇಲೆ ವಾಚರ್‍ಗಳನ್ನು ಸ್ಥಾಪನೆ ಮಾಡಲಾಗಿತ್ತು. ಸಂಸದ […]

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಮ್ಮತಿ

ಬೆಂಗಳೂರು,ಜ.25- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ನಡೆಯಲ್ಲಿರೋ 74 ನೇ ಗಣರಾಜ್ಯೋತ್ಸವ ಅಚರಣೆ ಸಂದರ್ಭದಲ್ಲಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ. ಗಣರಾಜ್ಯೋತ್ಸವ ಆಚರಣೆಗಾಗಿ ಮೈದಾನವನ್ನು ಸ್ವಚ್ಚಗೊಳಿಸಲಾಗುತ್ತಿದ್ದು, ನಾಳೆ ಬೆಳಿಗಿನ ಧ್ವಜಾರೋಹಣಕ್ಕೆಕಂದಾಯ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಅವರು ವಿವರಣೆ ನೀಡಿದ್ದಾರೆ. ಈದ್ಗಾ ಮೈದಾನದಲ್ಲಿ ನಾಳೆ ಕೇವಲ ರಾಷ್ಟ್ರ ಧ್ವಜಾರೋಹಣ ಮಾತ್ರ ನೆರವೇರಿಸಲಾಗುವುದು ಉಳಿದಂತೆ ಯಾವುದೇ ಸಾಂಸ್ಕøತಿಕ […]

ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಇನ್ನೂ ನಿರ್ಧಾರವಾಗಿಲ್ಲ : ಜಿಲ್ಲಾಧಿಕಾರಿ

ಬೆಂಗಳೂರು,ಜ.24- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚಾರಣೆ ಬಗ್ಗೆ ಇನ್ನು ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದರು. ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಸರ್ಕಾರದ ಆದೇಶಕ್ಕೆ ಕಾಯಲಾಗುತ್ತಿದೆ ಎಂದರು. ಈದ್ಗಾ ಮೈದಾನದಲ್ಲಿ ಗಣ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಈಗಾಗಲೇ ಹಲವಾರು ಸಂಘಟನೆಗಳು ನಮಗೆ ಮನವಿ ಮಾಡಿಕೊಂಡಿವೆ. ಈ ವಿಚಾರವಾಗಿ ನಾನು ಕಂದಾಯ […]

ತೀವ್ರಗೊಂಡ ಈದ್ಗಾ ಮೈದಾನ ವಿವಾದ, ಚಾಮರಾಜಪೇಟೆಯಲ್ಲಿ ಪ್ರತಿಭಟನೆಗೆ ನಿರ್ಬಂಧ

ಬೆಂಗಳೂರು, ಆ.8- ಚಾಮರಾಜ ಪೇಟೆಯ ಈದ್ಗಾ ಮೈದಾನವು ಕಂದಾಯ ಇಲಾಖೆ ಆಸ್ತಿ ಎಂದು ಘೋಷಣೆಯಾದರೂ ಅಲ್ಲಿ ಯಾವುದೇ ಪ್ರತಿಭಟನೆ ಮತ್ತು ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.ಹೀಗಾಗಿ ಮೈದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಮೂರು ಹೋಯ್ಸಳ ವಾಹನಗಳನ್ನು ಗಸ್ತು ನಿಲ್ಲಿಸಲಾಗಿದೆ. ಅದೇ ರೀತಿ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಮೈದಾನಕ್ಕೆ ಯಾರು ಬರಬಾರದು ಹಾಗೂ ಮೈದಾನದ ಬಳಿ ಗುಂಪು ಗೂಡಬಾರದು ಎಂದು ಪೊಲೀಸರು ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆ ಈದ್ಗಾ ಮೈದಾನ ಹಿಂದೂಗಳಿಗೆ […]

ಈದ್ಗಾ ಮೈದಾನ ಸರ್ಕಾರಿ ಆಸ್ತಿ ಎಂದು ಘೋಷಣೆ, ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ

ಬೆಂಗಳೂರು, ಆ.7- ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಾಗರಿಕ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಎಲ್ಲರೂ ಇಂದು ಸರ್ಕಾರಕ್ಕೆ ಮತ್ತು ಬಿಬಿಎಂಪಿಗೆ ಕೃತಜ್ಞತೆ ಸಲ್ಲಿಸಿದರು. ಬಹಳ ದಿನಗಳಿಂದ ಈ […]

ಚಾಮರಾಜಪೇಟೆ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು,ಜು.12- ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಚಾಮರಾಜಪೇಟೆ ಬಂದ್‍ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಚಾಮರಾಜಪೇಟೆ ಸುತ್ತಮುತ್ತಲ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ನಾವು ಕರೆ ನೀಡಿರುವ ಬಂದ್‍ಗೆ ಸ್ಥಳೀಯರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆಯ ಕಾರ್ಯದರ್ಶಿ ರುಕ್ಮಾಂಗದ ತಿಳಿಸಿದ್ದಾರೆ. ಈದ್ಗಾ ಮೈದಾನದ ಸುತ್ತಮುತ್ತ ಇರುವ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ತರಕಾರಿ, ಮೆಡಿಕಲ್ ಶಾಪ್‍ಗಳು ಮಾತ್ರ ಓಪನ್ ಆಗಿದ್ದು, ಬೆಳಿಗ್ಗೆ ಹಾಲು ಮಾರಾಟ ಮಾತ್ರ ಮಾಡಲಾಗಿತ್ತು. ಕೆಲ ಖಾಸಗಿ […]