ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ಅತ್ಯುತ್ತಮ ವಿಶ್ವವಿದ್ಯಾಲಯ

ನವದೆಹಲಿ,ಜು.15- ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಅಧ್ಯಯನ ವರದಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರಪ್ರದಾನ್ ಇಂದು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ವವಿದ್ಯಾಲಯ ದೇಶದಲ್ಲಿ ಉನ್ನತ ಸ್ಥಾನ ಪಡೆದಿದೆ. ಸತತವಾಗಿ ನಾಲ್ಕನೆ ವರ್ಷವೂ ರ್ಯಾಂಕಿಂಗ್ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ರ್ಯಾಂಕಿಂಗ್‍ನಲ್ಲಿ ಐಐಟಿ ಮದ್ರಾಸ್ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಐಐಎಸ್‍ಸಿ ದ್ವಿತೀಯ, ಬಾಂಬೆಯ ಐಐಟಿ ತೃತೀಯ ಸ್ಥಾನದಲ್ಲಿವೆ. ವಿಶ್ವವಿದ್ಯಾಲಯಗಳ ರ್ಯಾಂಕಿಂಗ್‍ನಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಎರಡನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ […]