ನೇಮಕಾತಿ ಅಕ್ರಮ : ರಾಜಸ್ಥಾನದ ಮಾದರಿ ಕಾನೂನು ರೂಪಿಸಲು ಒತ್ತಾಯ

ಬೆಂಗಳೂರು,ಸೆ.19- ನೇಮಕಾತಿ ಅಕ್ರಮಗಳಲ್ಲಿ ಭಾಗವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜಸ್ಥಾನದ ಮಾದರಿಯಲ್ಲಿ ಕಾನೂನು ರೂಪಿಸಬೇಕೆಂದು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳ ಸಂಘ ಒತ್ತಾಯಿಸಿದೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು, ಪದಾಧಿಕಾರಿಗಳು, 545 ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ಶೀಘ್ರ ವಿಚಾರಣೆ ಪೂರ್ಣಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಈ ಹುದ್ದೆಗಳು ಮತ್ತು ಹೊಸದಾಗಿ ಅಧಿಸೂಚಿಸಲ್ಪಡುವ 402 ಹುದ್ದೆಗಳಿಗೆ ನೇಮಕಾತಿ ನಡೆಸಲು ಶೀಘ್ರವೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೋವಿಡ್ ಕಾರಣದಿಂದಾಗಿ […]