ಈಶಾನ್ಯ ರಾಜ್ಯಗಳಲ್ಲಿ CAA ಜಾರಿ ಮಾಡಲು ಬೀಡಲ್ಲ: ಮಮತಾ

ಶಿಲ್ಲಾಂಗ್,ಫೆ.23- ಹೊರಗಿನಿಂದ ಬಂದವರು ಈಶಾನ್ಯ ರಾಜ್ಯಗಳಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಹೇರಲು ನಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಫೆ.27ರಂದು ನಡೆಯಲಿರುವ ಮೇಘಾಲಯ ಚುನಾವಣೆ ಅಂಗವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಅವರು, ಕಾನ್ರಾಡ್ ಸಂಗ್ಮಾ ನೇತೃತ್ವದ ಸರ್ಕಾರ ಯಾವುದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ವಿವಿಧ ಹಗರಣಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಆರೋಪ ಮಾಡಿದ್ದಾರೆ. […]