ಸರ್ಕಾರಕ್ಕೆ ರಾಜ್ಯಪಾಲರ ಶಭಾಷ್‍ಗಿರಿ

ಬೆಂಗಳೂರು, ಫೆ.10- ಕರ್ನಾಟಕವು ದೇಶದಲ್ಲೇ ಇತರೆ ರಾಜ್ಯಗಳಿಗಿಂತಲೂ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಪರ ರಾಜ್ಯವಾಗಿದ್ದು, ಪ್ರಜಾಸ್ನೇಹಿ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನಹಿತ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಶಭಾಷ್‍ಗಿರಿ ನೀಡಿದ್ದಾರೆ. ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ತಮ್ಮ 34 ಪುಟಗಳ ಭಾಷಣದಲ್ಲಿ ಸರ್ಕಾರದ ಸಾಧನೆಗಳ ಸಿಂಹಾವಲೋಕನ ಮಾಡಿದರು. ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ಕರ್ನಾಟಕ ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ. ಇಲ್ಲಿನ […]