ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಿಮಿಸಿದ ಮೀಸಲಾತಿ ಹೆಚ್ಚಳ

ಬೆಂಗಳೂರು,ಅ.19-ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ವರ್ಗಗಳ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿರುವ ಬೆನ್ನಲ್ಲೇ, ಇದೀಗ ಇತರ ಸಮುದಾಯದವರು ಕೂಡ ತಮಗೂ ಮೀಸಲಾತಿ ಹೆಚ್ಚಿಸುವಂತೆ ಒತ್ತಡ ಹಾಕುತ್ತಿರುವುದು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಿಮಿಸಿದೆ. ಚುನಾವಣೆಯಲ್ಲಿ ಯಾವುದೇ ಪಕ್ಷದ ಸೋಲು ಗೆಲುವನ್ನು ನಿರ್ಧರಿಸುವ ಪಂಚಮಸಾಲಿ, ಒಕ್ಕಲಿಗ, ಕುರುಬ, ಮರಾಠ ಸೇರಿದಂತೆ ವಿವಿಧ ಸಮುದಾಯದ ಮಠಾೀಶರು, ಮುಖಂಡರು ಸೇರಿದಂತೆ ಬಹಿರಂಗವಾಗಿಯೇ ತಮಗೂ ಶಿಕ್ಷಣ ಹಾಗೂ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ನ್ಯಾ.ನಾಗಮೋಹನದಾಸ್ […]