ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕಾಗಿ ಪಕ್ಷಾತೀತ ಹೋರಾಟಕ್ಕೆ ಸಜ್ಜು

ಬೆಂಗಳೂರು, ನ.26- ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರನ್ನು ಆಗ್ರಹಿಸಿ ಪಕ್ಷಾತೀತ ಹೋರಾಟ ನಡೆಸಲು ಒಕ್ಕಲಿಗ ಸಮು ದಾಯ ಸಜ್ಜಾಗಿದ್ದು, ಹೋರಾಟದ ರೂಪುರೇಷೆ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ಹೋರಾಟದ ಕುರಿತ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಮತ್ತು […]

ಇತರೆ ವರ್ಗಗಳ ಮೀಸಲಾತಿ ಬೇಡಿಕೆ ಹೆಚ್ಚಳ : ಇಕ್ಕಟ್ಟಿನಲ್ಲಿ ಸರ್ಕಾರ

ಬೆಂಗಳೂರು,ನ.26- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಆಡಳಿತಾರೂಢ ಬಿಜೆಪಿಗೆ ಇತರೆ ಸಮುದಾಯಗಳ ಮೀಸಲಾತಿ ಹೆಚ್ಚಳ ತಲೆನೋವಾಗಿ ಪರಿಣಮಿಸುತ್ತಿದೆ. ವಿಧಾಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಶಾಲಿ ಲಿಂಗಾಯಿತ, ಒಕ್ಕಲಿಗ ಮತ್ತು ಕುರುಬ ಸೇರಿದಂತೆ ಬೇರೆ ಬೇರೆ ಸಮುದಾಯದವರೂ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಗಡುವು ನೀಡುತ್ತಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮುದಾಯವನ್ನು ಎದುರು ಹಾಕಿಕೊಳ್ಳುವಂತೆಯೂ ಇಲ್ಲ. […]

ಮೀಸಲಾತಿ ಹೆಚ್ಚಳ : ಹೋರಾಟದ ರೂಪುರೇಷೆ ಬಗ್ಗೆ 27ಕ್ಕೆ ಒಕ್ಕಲಿಗರ ಸಭೆ

ಬೆಂಗಳೂರು,ನ.24- ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕೈಗೊಳ್ಳಲಿರುವ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ನ.27ರಂದು ಒಕ್ಕಲಿಗರ ಸಮುದಾಯದ ಪ್ರಮುಖ ಮುಖಂಡರ ಸಭೆ ಕರೆಯಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಮ್ಮ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ಸಮಾಜದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ […]

ಮೀಸಲಾತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಪ್ರತಿಭಟನೆ ಕೈಬಿಟ್ಟ ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು,ಅ.24-ಪರಿಶಿಷ್ಟ ಜಾತಿ , ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ತಮ್ಮ ನಿರಶನವನ್ನು ಕೊನೆಗೂ ಹಿಂತೆಗೆದುಕೊಂಡಿದ್ದಾರೆ. ಕಳೆದ 220ಕ್ಕೂ ಹೆಚ್ಚು ದಿನಗಳಿಂದ ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಗಿಲ್‍ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ ಇದೀಗ ಸರ್ಕಾರ ಎಸ್ಸಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ […]

ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ

ಬೆಂಗಳೂರು,ಅ.20- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಸರ್ಕಾರದ ಈ ತೀರ್ಮಾನದಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ […]

ವಿಧಾನಸಭೆ ಚುನಾವಣೆಗೆ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದೆ ಮೀಸಲಾತಿ ಹೆಚ್ಚಳ

ಬೆಂಗಳೂರು,ಅ.15- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಿರುವುದೇ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ದಲಿತರು, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಜನತೆಯ ಮುಂದಿಟ್ಟು ಮತ ಸೆಳೆಯುವ ಲೆಕ್ಕಚಾರದಲ್ಲಿ ಕಮಲ ನಾಯಕರು ಇದ್ದಾರೆ. ಇದರ ಜತೆಗೆ ಹಿಂದುಳಿದವರು ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಇದರ ಮೊದಲ ಹಂತವಾಗಿ ಈಗಾಗಲೇ ದಲಿತರ ಮನೆಗಳಿಗೆ ಭೇಟಿ ನೀಡಿ ತಿಂಡಿ, ಭೋಜನ ಸ್ವೀಕರಿಸುವ ಮೂಲಕ […]

ಶೈಕ್ಷಣಿಕ ಸಾಲ ಮಿತಿ 10 ಲಕ್ಷಕ್ಕೆ ಏರಿಕೆ

ನವದೆಹಲಿ,ಅ.13- ಶಿಕ್ಷಣ ಸಾಲಕ್ಕೆ ಖಾತ್ರಿಯ ಮಿತಿಯನ್ನು 7.5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬ್ಯಾಂಕ್ ಆಡಳಿತ ಮಂಡಳಿಗಳ ಪ್ರಸ್ತಾವಕ್ಕೆ ಕೇಂದ್ರ ಹಣಕಾಸು ಇಲಾಖೆಯು ಹಸಿರು ನಿಶಾನೆ ತೋರಿಸಿದ್ದು, ಈ ಸಂಬಂಧ ಶೀಘ್ರ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ. ಇದರೊಂದಿಗೆ ಶಿಕ್ಷಣ ಸಾಲ ವಿತರಣೆಗೆ ಇರುವ ಷರತ್ತುಗಳನ್ನೂ ಸಡಿಲಿಸುವ ಸಾಧ್ಯತೆಯಿದ್ದು ಈ ಬೆಳವಣಿಗೆಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕೇಂದ್ರ ಸರ್ಕಾರದ ಈ ಕ್ರಮವು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಸಾಲ ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬ ಮತ್ತು ಸಾಲದ […]

ಒಕ್ಕಲಿಗರ ಮೀಸಲಾತಿ ಶೇ.12ರಷ್ಟು ಹೆಚ್ಚಿಸಲು ಸಿಎಂಗೆ ಮನವಿ

ಬೆಂಗಳೂರು,ಅ.12- ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ಪ್ರಮಾಣವನ್ನು ಶೇ.12ರಷ್ಟು ಹೆಚ್ಚಳ ಮಾಡಬೇಕೆಂದು ಒಕ್ಕಲಿಗ ಮಹಾಸಭಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಒಕ್ಕಲಿಗ ಮಹಾಸಭಾ, 2ನೇ ಅತಿದೊಡ್ಡ ಸಮುದಾಯವಾಗಿರುವ ಒಕ್ಕಲಿಗರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ […]

ಹೂವು,ಹಣ್ಣಿನ ದರ ಏರಿಕೆಯಾದರೂ ಕುಗ್ಗದ ಹಬ್ಬದ ಉತ್ಸಾಹ

ಬೆಂಗಳೂರು,ಅ.4- ಜನರಲ್ಲಿ ಹಬ್ಬದ ಸಡಗರ ಜೋರಾಗುತ್ತಿದ್ದಂತೆ ಹೂವು-ಹಣ್ಣು ಬೆಲೆ ಏರಿಕೆಯಾಗಿದೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಜನ ಮಾರುಕಟ್ಟೆಗಳಿಗೆ ಮುಗಿಬಿದ್ದು ಹೂವು, ಹಣ್ಣು ಖರೀದಿಗೆ ಮುಂದಾಗಿರುವುದರಿಂದ ವ್ಯಾಪಾರಿಗಳು ಬೆಲೆ ಏರಿಕೆ ಮಾಡಿದ್ದಾರೆ. ಆದರೂ ಜನ ಭರ್ಜರಿ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನಗರದ ಬಹುತೇಕ ಮಾರುಕಟ್ಟೆಗಳಲ್ಲಿ ಜನ ಸಾಗರ ಕಂಡು ಬರುತ್ತಿದ್ದು, ಕೆ.ಆರ್.ಮಾರುಕಟ್ಟೆಯಲ್ಲಿ ಬೀದಿ ಬದಿಯಲ್ಲೇ ಭರ್ಜರಿ ವ್ಯಾಪಾರ ನಡೆಯುತ್ತಿರುವುದರಿಂದ ರಸ್ತೆಗಳಲ್ಲಿ ವಾಹನ ಸಂಚಾರ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೀಗಾಗಿ ಕೆ.ಆರ್.ಮಾರುಕಟ್ಟೆ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸಂಚಾರ […]

ಸತತ ಮಳೆಯಿಂದ ಅಂತರ್ಜಲ ವೃದ್ಧಿ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು,ಸೆ.29- ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಪ್ಪು, ಬೂದು ಪ್ರದೇಶಗಳು ಕಡಿಮೆಯಾಗಿವೆ. ಅಂತರ್ಜಲ ಸಾಕಷ್ಟು ಹೆಚ್ಚಳವಾಗಿರುವುದರಿಂದ ನೀರಿನಲ್ಲಿದ್ದ ಅಪಾಯಕಾರಿ ರಾಸಾಯನಿಕ ಅಂಶಗಳು ಕಡಿಮೆಯಾಗಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕಪ್ಪು ಮತ್ತು ಬೂದು ಪ್ರದೇಶದ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಸುರಕ್ಷಿತ ಹಾಗೂ ಶುದ್ದ ಕುಡಿಯುವ ನೀರು ಲಭ್ಯವಾಗುತ್ತಿದೆ. ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿ ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ಅಂತರ್ಜಲದ ಪ್ರಮಾಣವು ಸಾಕಷ್ಟು ಹೆಚ್ಚಳವಾಗಿದೆ. ಇದರಿಂದ ಟ್ಯಾಂಕರ್ […]