ಲಾಲ್‍ಬಾಗ್‍ ಫಲಪುಷ್ಪ ಪ್ರದರ್ಶನಕ್ಕೆ ಹರಿದು ಬಂತು ಜನಸಾಗರ

ಬೆಂಗಳೂರು,ಆ.15- ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಲಾಲ್‍ಬಾಗ್‍ನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಜನಸಾಗರವೇ ಹರಿದುಬಂದಿದೆ. ಅಮೃತ ಮಹೋತ್ಸವದ ನಿಮಿತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯವರು ಇಂದು ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಮಾಡಿರುವುದರಿಂದ ನಗರದ ಮೂಲೆ ಮೂಲೆಗಳಿಂದ ಲಾಲ್‍ಬಾಗ್‍ನತ್ತ ಜನರ ದಂಡೇ ಹರಿದುಬಂದಿತ್ತು. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘ ಹಮ್ಮಿಕೊಂಡಿರುವ ವರನಟ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬೀಳುವ ಹಿನ್ನಲೆಯಲ್ಲಿ ಕೆಂಪುತೋಟ ಜನರಿಂದ ತುಂಬಿ ತುಳುಕುತ್ತಿದೆ. […]