ಭಾರತದಿಂದ ಆಫ್ಘಾನಿಸ್ಥಾನಕ್ಕೆ ಹತ್ತು ಲಕ್ಷ ಕೋವಿಡ್ ಲಸಿಕೆ ಪೂರೈಕೆ

ನವದೆಹಲಿ, ಜ.1- ತಾಲಿಬಾನ್ ಆಕ್ರಮಿತ ಆಫ್ಘಾನಿಸ್ಥಾನಕ್ಕೆ ಮೊದಲ ಬಾರಿಗೆ ಭಾರತ ಸರ್ಕಾರ ಹತ್ತು ಲಕ್ಷ ಕೋವ್ಯಾಕ್ಸಿನ್ ಲಸಿಕೆಗಳನ್ನು ಪೂರೈಕೆ ಮಾಡಲಾರಂಭಿಸಿದೆ. ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳಿಗೆ ಲಸಿಕೆ ಪೂರೈಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂತರಾಷ್ಟ್ರೀಯ ಸಮುದಾಯದೊಂದಿಗೆ ಸಹಮತ ವ್ಯಕ್ತ ಪಡಿಸಿದೆ. ಅದರ ಭಾಗವಾಗಿ ಈಗಾಗಲೇ ಹಲವು ರಾಷ್ಟ್ರಗಳಿಗೆ ಲಸಿಕೆ ಪೂರೈಸಲಾಗಿದೆ. ಇದೇ ಮೊದಲ ಬಾರಿಗೆ ಆಫ್ಘಾನಿಸ್ಥಾನಕ್ಕೆ ಐದು ಲಕ್ಷ ಲಸಿಕೆಗಳನ್ನು ರವಾನಿಸಲಾಗಿದ್ದು, ಸಂಜೆಯಯ ವೇಳೆಗೆ ಲಸಿಕೆ ಹೊತ್ತ ಇರಾನ್‍ನ ಮಹಾನ್ ವಿಮಾನ ಕಾಬೂಲ್ ತಲುಪಲಿವೆ. […]