ದೇಶದಲ್ಲಿ 5 ಲಕ್ಷ ದಾಟಿದ ಕೋವಿಡ್ ಮರಣ ಪ್ರಕರಣಗಳು

ನವದೆಹಲಿ, ಫೆ.4- ಭಾರತವು 5 ಲಕ್ಷಕ್ಕೂ ಅಧಿಕ ಕೋವಿಡ್ ಮರಣಗಳು ಸಂಭವಿಸಿದ ಪ್ರಪಂಚದ ಮೂರನೆ ದೇಶವಾಗಿದೆ. ಅಮೆರಿಕ, ಬ್ರೆಜಿಲ್ ಮೊದಲ ಎರಡು ಸ್ಥಾನಗಳಲ್ಲಿವೆ. ಭಾರತದಲ್ಲಿ 1,49,394 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ 4,19,52,712ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಿಳಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಇನ್ನಷ್ಟು ಇಳಿದಿದ್ದು, 14,35,369ಕ್ಕೆ ತಲುಪಿದೆ. ನಿನ್ನೆ ಒಂದೇ ದಿನ 1072 ಜನರು ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟಾರೆ ಕೋವಿಡ್ ಮರಣಗಳ […]