ಅರಾಜಕತೆಯಲ್ಲಿ ಮುಳುಗಿದ ಶ್ರೀಲಂಕಾಗೆ ನೆರವಿನ ಹಸ್ತ ಚಾಚಿದ ಭಾರತ

ತಿರುವನಂತಪುರಂ,ಜು.10-ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾ ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಭಾರತ ಎಲ್ಲ ರೀತಿಯ ಸಹಾಯ ಮಾಡಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ವಿದೇಶಿ ವಿನಿಮಯ ಕೊರತೆ ಹಾಗೂ ಆರ್ಥಿಕ ಮುಗ್ಗಟ್ಟಿನಿಂದ ಸಂಕಷ್ಟದಲ್ಲಿರುವ ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಉಲ್ಬಣಗೊಂಡಿವೆ. ದೇಶದ ಅಧ್ಯಕ್ಷರ ಸರ್ಕಾರಿ ಬಂಗಲೆಯನ್ನು ಜನ ಆಕ್ರಮಿಸಿಕೊಂಡಿದ್ದಾರೆ. ಪ್ರಧಾನಿಯವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ನೆರೆಯ ರಾಷ್ಟ್ರದ ಬೆಳವಣಿಗೆಗಳ ಬಗ್ಗೆ ತಿರುವನಂತಪುರಂನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಜೈಶಂಕರ್ ಅವರು, ಸದ್ಯಕ್ಕೆ ಅಲ್ಲಿ ನಿರಾಶ್ರಿತರಾಗುವಂತಹ […]