ಲತಾ ಮಂಗೇಶ್ಕರ್ ನಿಧನಕ್ಕೆ ಸಿದ್ದರಾಮಯ್ಯ, ಡಿಕೆಶಿ ಸಂತಾಪ

ಬೆಂಗಳೂರು, ಫೆ.6- ದೇಶ ಕಂಡ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಲತಾ ಮಂಗೇಶ್ಕರ್ ಕೊರೊನಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಮತ್ತೆ ಆರೋಗ್ಯ ಹದಗೆಟ್ಟು ವೆಂಟಿಲೇಟರ್‍ನಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದಿದ್ದಾರೆ. ಚಿಕ್ಕವಯಸ್ಸಿನಲ್ಲೇ ಹಾಡಲು ಆರಂಭಿಸಿದ ಲತಾ ಮಂಗೇಶ್ಕರ್ 30 ಸಾವಿರ ಹಾಡುಗಳನ್ನು ಹಾಡುವ ಮೂಲಕ ಚಿತ್ರರಂಗದಲ್ಲಿ ದೊಡ್ಡ […]