ನವೀನ್ ಫೋಟೋ ಇಟ್ಟು ಮೂರು ದಿನದ ಕಾರ್ಯ ಮಾಡಿದ ಕುಟುಂಬ

ಹುಬ್ಬಳ್ಳಿ, ಮಾ.3- ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಅವರ ಪಾರ್ಥಿವ ಶರೀರ ಬರುವುದನ್ನು ಕುಟುಂಬಸ್ಥರು ಎದುರು ನೋಡುತ್ತಿದ್ದಾರೆ. ಪಾರ್ಥಿವ ಶರೀರ ಯಾವಾಗ ಬರುತ್ತದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಭಾರತ ಸರ್ಕಾರದಿಂದ ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದು ಮೃತ ನವೀನ್ ದೊಡ್ಡಪ್ಪ ಉಜ್ಜನಗೌಡ ಗ್ಯಾನಗೌಡರ್ ತಿಳಿಸಿದರು. ನವೀನ್ ಮೃತಪಟ್ಟು ಮೂರು ದಿನಗಳಾಗಿದ್ದು, ವೀರಶೈವ ಸಂಪ್ರದಾಯದಂತೆ ಮೂರು ದಿನಗಳ ಕಾರ್ಯವನ್ನು ಸ್ವಾಮೀಜಿಯವರ ನೇತೃತ್ವದಲ್ಲಿ ಕುಟುಂಬಸ್ಥರು ನೆರವೇರಿಸಿದರು. ನವೀನ್ ಫೋಟೋ […]