ಸಿದ್ದು ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್‍ಗಳಿಗೆ ಬೀಗ..!

ಬೆಂಗಳೂರು,ಮಾ.14- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲು ಶೆಫ್‍ಟಾಕ್ ಸಂಸ್ಥೆ ನಿರ್ಧರಿಸಿದೆ. ಇಂದಿರಾ ಕ್ಯಾಂಟೀನ್‍ಗೆ ಬಿಡುಗಡೆ ಮಾಡಬೇಕಾದ ಅನುದಾನದವನ್ನು ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಬಿಡುಗಡೆ ಮಾಡದೆ ಸತಾಯಿಸುತ್ತಿರುವುದರಿಂದ ಸಂಸ್ಥೆ ಇಂತಹ ನಿರ್ಧಾರ ಕೈಗೊಂಡಿದೆ. ಕಳೆದ ಐದು ವರ್ಷಗಳಿಂದ 47 ಕೋಟಿ ಬಾಕಿ ಹಣ ಬರಬೇಕಿದೆ. ಬಿಲ್ ಬಿಡುಗಡೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಪದೇ ಪದೇ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶೆಫ್‍ಟಾಕ್ […]