ಬೆಲೆ ಏರಿಕೆ ವಿರೋಧಿಸಿ ಸಂಸತ್ ಭವನದ ಮುಂದೆ ಪ್ರತಿಭಟನೆ

ನವದೆಹಲಿ, ಜು.19- ಅಗತ್ಯ ವಸ್ತುಗಳ ಬೆಲೆ ಏರಿಕೆ, ದುಬಾರಿ ಜಿಎಸ್‍ಟಿ ದರ ವಿರೋಧಿಸಿ ಪ್ರತಿಪಕ್ಷಗಳು ಇಂದು ಸಂಸತ್ ಭವನದ ಮುಂದಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಿ ಮಧ್ಯಾಹ್ನದ ವೇಳೆಗೆ ಕಲಾಪ ಮುಂದೂಡಿಕೆಯಾಗಿದೆ. ಸಂಸತ್ ಆವರಣದಲ್ಲಿನ ಮಹಾತ್ಮಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಚತುರ್ವೇದಿ ಸೇರಿದಂತೆ ಅನೇಕ ನಾಯಕರು […]