ಕೋರೆಗಾಂವ್-ಭೀಮಾ ಹಿಂಸಾಚಾರ ತನಿಖಾ ಆಯೋಗದ ಅಧಿಕಾರವಧಿ ವಿಸ್ತರಣೆ

ಪುಣೆ,ಜ.19- ಪುಣೆ ನಗರದ ಹೊರವಲಯದಲ್ಲಿ 2018ರ ಜನವರಿ 1ರಂದು ನಡೆದ ಹಿಂಸಾಚಾರದ ಕುರಿತು ತನಿಖೆ ನಡೆಸುತ್ತಿರುವ ಕೋರೆಗಾಂವ್-ಭೀಮಾ ತನಿಖಾ ಆಯೋಗದ ಅಧಿಕಾರವಯನ್ನು ಮಹಾರಾಷ್ಟ್ರ ಸರ್ಕಾರ ಮೂರು ತಿಂಗಳವರೆಗೂ ವಿಸ್ತರಣೆ ಮಾಡಿದೆ. ಮತ್ತಷ್ಟು ಸಾಕ್ಷಿಗಳನ್ನು ದಾಖಲಿಸಬೇಕಿರುವುದರಿಂದ ಮತ್ತಷ್ಟು ಕಾಲಾವಕಾಶ ಅಗತ್ಯವಿದೆ ಎಂದು ಸಮಿತಿ ಮನವಿ ಮಾಡಿತ್ತು. ಹಿಂಸಾಚಾರದ ವಿಚಾರಣೆಗಾಗಿ ರಚಿಸಲಾಗಿರುವ ಆಯೋಗದಲ್ಲಿ ಇಬ್ಬರು ಸದಸ್ಯರಿದ್ದಾರೆ. ಆಯೋಗಕ್ಕೆ 2022ರ ಡಿಸೆಂಬರ್ 31ರವರೆಗೆ ಕಾಲಾವಕಾಶವಿತ್ತು. ಅದನ್ನು ಈ ವರ್ಷದ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. 1818 […]

ವಿಮ್ಸ್ ಆಸ್ಪತ್ರೆ ರೋಗಿಗಳ ಸಾವಿನ ಪ್ರಕರಣ: ನಿರ್ಲಕ್ಷ್ಯ ಅಧಿಕಾರಿಗಳ ಅಮಾನತು

ಬೆಂಗಳೂರು,ಸೆ.18- ತೀವ್ರ ವಿವಾದ ಸೃಷ್ಟಿಸಿರುವ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ರೋಗಿಗಳ ಸಾವಿನ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಪಡಿಸಲು ಸರ್ಕಾರ ತೀರ್ಮಾನಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ತನಿಖಾ ಸಮಿತಿ ವರದಿ ಸರ್ಕಾರದ ಕೈ ಸೇರುತ್ತಿದ್ದಂತೆ ಉದಾಸೀನ ತೋರಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ವಿಮ್ಸ್‍ನಲ್ಲಿ ನಡೆಯುತ್ತಿರುವ ಗುಂಪುಗಾರಿಕೆ ಮತ್ತು ಆಡಳಿತ ಮಂಡಳಿಯ ಉದಾಸೀನದಿಂದಲೇ ಬಡ ರೋಗಿಗಳು ಸಾವನ್ನಪ್ಪಿರುವುದು ಕಂಡುಬರುವುದರಿಂದ ವೈದ್ಯರಿಗೆ ಬಿಸಿ […]

ಸೋನಿಯಾ ಇಡಿ ವಿಚಾರಣೆ ವಿರೋಧಿಸಿ ರಾಜಭವನ ಚಲೋ

ಬೆಂಗಳೂರು,ಜು.17- ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯದ ಕ್ರಮ ವಿರೋಧಿಸಿ ಕಾಂಗ್ರೆಸ್ ಜು.21ರಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದೆ. ನಗರದಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿ ಪ್ರತಿಭಟನೆಯ ಮಾಹಿತಿ ತಿಳಿಸಿದರು.ಬಿಜೆಪಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಕಪ್ಪು ಮಸಿ ಬಳಿಯುವ ಯತ್ನ ಮಾಡುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಗಿದು ಹೋದ ಅಧ್ಯಾಯ ಎಂದು ಹಣಕಾಸು ಸಚಿವರಾಗಿದ್ದ ಅರುಣ್‍ಜೈಟ್ಲಿ […]