ಅತ್ತೆ ಮಗಳ ಮೇಲೆ ಅತ್ಯಾಚಾರ ಆರೋ : ಇನ್‍ಸ್ಪೆಕ್ಟರ್ ಅಮಾನತು

ಚಿತ್ರದುರ್ಗ,ಅ.24-ಅತ್ತೆ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಇನ್‍ಸ್ಪೆಕ್ಟರ್ ಉಮೇಶ್ ಅವರನ್ನು ಸೇವೆಯಿಂದ ಅಮಾನತುಪಡಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಆಗಿದ್ದ ಜಿ.ಬಿ.ಉಮೇಶ್ ಅವರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು […]

ನ್ಯಾಯಾಧೀಶರ ಭೇಟಿ ವೇಳೆ ಠಾಣೆ ಬಾಗಿಲು ಮುಚ್ಚಿದ ಇನ್ಸ್ ಪೆಕ್ಟರ್ ಅಮಾನತು

ಚಾಮರಾಜನಗರ, ಜ.12- ಇಲ್ಲಿನ ಸಿಇಎನ್ ಠಾಣೆಗೆ ನ್ಯಾಯಾಧೀಶರು ಭೇಟಿ ನೀಡಿದ ವೇಳೆ ಬಾಗಿಲು ಮುಚ್ಚಿದ್ದರಿಂದ ಪೊಲೀಸ್ ಇನ್ಸ್‍ಪೆಕ್ಟರ್‍ರನ್ನು ಅಮಾನತು ಮಾಡಲಾಗಿದೆ. ಸಿಇಎನ್ (ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ ತಡೆ) ಪೊಲೀಸ್ ಇನ್ಸ್‍ಪೆಕ್ಟರ್ ನಂಜಪ್ಪ ಅಮಾನತುಗೊಂಡವರು. ನ್ಯಾಯಾಧೀಶರಾದ ಗಣಪತಿ ಗುರುಸಿದ್ದಪ್ಪ ಬಾದಾಮಿ ಅವರು ಸಿಇಎನ್ ಪೊಲೀಸ್ ಠಾಣೆಗೆ ಕಳೆದ 3ರಂದು ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಠಾಣೆಯಲ್ಲಿ ಯಾರೂ ಇಲ್ಲದೆ ಬಾಗಿಲು ಹಾಕಲಾಗಿತ್ತು. ಈ ರೀತಿ ಠಾಣೆಗೆ ಬಾಗಿಲು ಹಾಕಿದರೆ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೆ ದೂರು ಕೊಡಲು […]