ಮತದಾರರ ಮಾಹಿತಿ ಕಳುವು ಕುರಿತು ಚುನಾವಣಾ ಆಯೋಗದಿಂದ ತನಿಖೆ

ಬೆಂಗಳೂರು, ನ.18- ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಈ ಆರೋಪ ಕುರಿತಂತೆ ಸಮಗ್ರ ತನಿಖೆ ನಡೆಸಲು ತೀರ್ಮಾನಿಸಿದೆ. ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಆಯೋಗ ಈ ತೀರ್ಮಾನ ಕೈಗೊಂಡಿದೆ. ಇಂತಹ ಆರೋಪಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ಅನುಮಾನ ಮೂಡುವುದರಿಂದ ಈ ಕುರಿತಂತೆ ಸಂಪೂರ್ಣ ತನಿಖೆ ನಡೆಸಲು ಪ್ರಾದೇಶಿಕ ಆಯುಕ್ತರನ್ನು ತನಿಖಾಕಾಧಿರಿಯನ್ನಾಗಿ ನೇಮಕ ಮಾಡಲಾಗಿದೆ. ನ.1ರಿಂದಲೇ ಪೂರ್ವಾನ್ವಯವಾಗುವಂತೆ […]

ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರು ನಾಪತ್ತೆ : ಚಿಲುಮೆ ಕೈವಾಡ ಶಂಕೆ

ಬೆಂಗಳೂರು,ನ.18- ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಬಿಬಿಎಂಪಿಯ 243 ವಾರ್ಡ್‍ಗಳ ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. 243 ವಾರ್ಡ್‍ಗಳ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿತ್ತು. ಆದರೆ, ಇದೀಗ ಚಿಲುಮೆ ಸಂಸ್ಥೆ ಮತದಾರರ ವೈಯಕ್ತಿಕ ಮಾಹಿತಿ ಕಲೆ ಹಾಕುವ ವಿಚಾರ ಪರಿಷ್ಕರಣೆಗೆ ತೊಡಕಾಗಿ ಪರಿಣಮಿಸುವ ಸಾಧ್ಯತೆಗಳಿವೆ. ಚಿಲುಮೆ ಸಂಸ್ಥೆಯ ಸಿಬ್ಬಂದಿಗಳು ಬಿಎಲ್‍ಒಗಳು ಎಂದು ಐಡಿ ಕಾರ್ಡ್ ತಯಾರಿಸಿ ಮತದಾರರ ಮನೆ ಮನೆಗೂ ಹೋಗಿ ಮಾಹಿತಿ ಕಲೆ ಹಾಕಿದೆ ಎಂಬ […]

ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ಅತ್ಯುತ್ತಮ ವಿಶ್ವವಿದ್ಯಾಲಯ

ನವದೆಹಲಿ,ಜು.15- ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಅಧ್ಯಯನ ವರದಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರಪ್ರದಾನ್ ಇಂದು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ವವಿದ್ಯಾಲಯ ದೇಶದಲ್ಲಿ ಉನ್ನತ ಸ್ಥಾನ ಪಡೆದಿದೆ. ಸತತವಾಗಿ ನಾಲ್ಕನೆ ವರ್ಷವೂ ರ್ಯಾಂಕಿಂಗ್ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ರ್ಯಾಂಕಿಂಗ್‍ನಲ್ಲಿ ಐಐಟಿ ಮದ್ರಾಸ್ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಐಐಎಸ್‍ಸಿ ದ್ವಿತೀಯ, ಬಾಂಬೆಯ ಐಐಟಿ ತೃತೀಯ ಸ್ಥಾನದಲ್ಲಿವೆ. ವಿಶ್ವವಿದ್ಯಾಲಯಗಳ ರ್ಯಾಂಕಿಂಗ್‍ನಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಎರಡನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ […]