ನಕಲಿ ಅಂಕಪಟ್ಟಿ ದಂಧೆ: ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು,ಜ.27- ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಂಬಂಧಪಟ್ಟ ವಿವಿಧ ಕೋರ್ಸ್‍ಗಳ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಜಾಲದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ, 6800ಕ್ಕಿಂತಲೂ ಅಧಿಕ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜಿಸ್, ಜೆಪಿನಗರದ ಎಸ್‍ಸಿಸ್ಟಮ್ ಕ್ವೆಸ್ಟ್, ಭದ್ರಪ್ಪ ಲೇಔಟ್‍ನ ಆರೂಹಿ ಇನ್ಸ್‍ಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜು ಮೇಲೆ ಏಕಕಾಲದಲ್ಲಿ ಸಿಸಿಬಿ ಪೊಲೀಸ್ ತಂಡ ದಾಳಿ ಮಾಡಿ ನಕಲಿ […]

RSS-BJPಯಿಂದ ಭಯದ ದೇಶದಲ್ಲಿ ವಾತಾವರಣ ಸೃಷ್ಟಿ : ರಾಹುಲ್

ಶಿಮ್ಲಾ,ಜ.18- ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರ ಹಿಡಿರುವ ಹಿಮಾಚಲ ಪ್ರದೇಶಕ್ಕೆ ರಾಹುಲ್‍ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದೆ. ನಿನ್ನೆಯವರೆಗೂ ಪಂಜಾಬ್‍ನಲ್ಲಿ ಸಂಚರಿಸಿದ್ದ ಯಾತ್ರೆ ನಾಳೆ ಕಾಶ್ಮೀರ ಪ್ರವೇಶಿಸುವ ಮಾರ್ಗಸೂಚಿ ನಿಗದಿಯಾಗಿತ್ತು. ಹಿಮಾಚಲ ಪ್ರದೇಶ ಪಾದಯಾತ್ರೆಯ ನಕ್ಷೆಯಲ್ಲಿ ಇರಲಿಲ್ಲ. ಆದರೆ ಸ್ಥಳೀಯ ನಾಯಕರ ಒತ್ತಾಯದ ಮೇರೆಗೆ ರಾಹುಲ್‍ಗಾಂಧಿ ಮಾರ್ಗ ಬದಲಾವಣೆ ಮಾಡಿದ್ದಾರೆ. ಇಂದು ಬೆಳಗ್ಗೆ ಹಿಮಾಚಲಪ್ರದೇಶದ ಇಂದೋರಾ ವಿಧಾನಸಭಾ ಕ್ಷೇತ್ರದಲ್ಲಿ 24 ಕಿಲೋಮೀಟರ್ ದೂರ ಪಾದಯಾತ್ರೆ ಕ್ರಮಿಸಲಿದೆ. ಮಾರ್ಗ ಮಧ್ಯೆ ರಾಹುಲ್‍ಗಾಂಧಿ […]