“ಅಂತಾರಾಜ್ಯ ಗಡಿಗಳ ಬಂದ್ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ”

ಬೆಳಗಾವಿ, ಜ.5- ಕೊರೊನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತಾರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಹಲವು ಕಾರ್ಯಕ್ರಮಕ್ಕಾಗಿ ಬಂದಿದ್ದ ಸಚಿವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಕ್ವಾರಂಟೈನ್‍ನಲ್ಲಿಟ್ಟು ನಿಗಾ ವಹಿಸಲಾಗುವುದು. ಉಳಿದಂತೆ ಅಂತಾರಾಜ್ಯ ಚಟುವಟಿಕೆ […]