ಇಬ್ಬರು ಅಂತರರಾಜ್ಯ ಆರೋಪಿಗಳ ಸೆರೆ : 7.43 ಲಕ್ಷ ರೂ. ಮೌಲ್ಯದ ಮಾಲು ವಶ

ಬೆಂಗಳೂರು,ಫೆ.23- ಮನೆಕಳ್ಳತನ ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 7.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಾನುಗಳು ಮತ್ತು ದುಬಾರಿ ಬೆಲೆಯ ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶ ಮೂಲದ ವಿನೋದ್ ಕುಮಾರ್ (27) ಮತ್ತು ನಗರದ ಶರತ್‍ಕುಮಾರ್ (30) ಬಂಧಿತರು.ವಿದ್ಯಾರಣ್ಯಪುರದ ಬೆಸ್ಟ್‍ಕೌಂಟ್ಟಿ-2 ನಿವಾಸಿ ಸುಮತಿ ಕುಟುಂಬದವರು ಕಳೆದ ಆಗಸ್ಟ್ 26ರಂದು ತಮಿಳುನಾಡಿನ ಚೆನ್ನೈಗೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಇವರ ಮನೆಯ ಬಾಗಿಲ ಬೀಗ ಮುರಿದು ಒಳನುಗ್ಗಿ ಮನೆಯನ್ನೆಲ್ಲಾ ಜಾಲಾಡಿ […]

ಕರ್ನಾಟಕ-ಆಂಧ್ರಪ್ರದೇಶ ರಾಜ್ಯಗಳ ನಡುವೆ ಅಂತರರಾಜ್ಯ ಸಾರಿಗೆ ಒಪ್ಪಂದ

ಬೆಂಗಳೂರು, ಫೆ.3-ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳಾಗಿವೆ. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಈ ಹಿಂದಿನ ಅಂತರರಾಜ್ಯ ಸಾರಿಗೆ ಒಪ್ಪಂದವನ್ನು 2008ರಲ್ಲಿ ಮಾಡಿಕೊಳ್ಳಲಾಗಿತ್ತು. ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ನಿನ್ನೆ ವಿಜಯವಾಡದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ […]

ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ, 29 ದ್ವಿಚಕ್ರ ವಾಹನ, ಆಟೋ ವಶ

ಬೆಂಗಳೂರು,ಸೆ.17- ದ್ವಿಚಕ್ರ ವಾಹನಗಳ ಹ್ಯಾಂಡಲ್‍ಲಾಕ್ ಮುರಿದು ಕಳ್ಳತನ ಮಾಡಿ ನಂಬರ್ ಪ್ಲೇಟ್ ತೆಗೆದು ತಮಿಳುನಾಡಿನಲ್ಲಿ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿ 15 ಲಕ್ಷ ರೂ. ಮೌಲ್ಯದ 29 ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರ ನಿವಾಸಿ ಶಾನ್, ತಮಿಳುನಾಡು ಮೂಲದ ರಂಜಿತ್‍ಕುಮಾರ್, ಶಾಹೇನ್ ಶಾ ಮತ್ತು ಶಿವ ಬಂಧಿತ ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರು. ಆರೋಪಿಗಳಿಂದ 9 ಹೋಂಡಾ […]

ಇಬ್ಬರು ಅಂತಾರಾಜ್ಯ ಮನೆಗಳ್ಳರ ಸೆರೆ

ಬೆಂಗಳೂರು,ಆ.20- ಮನೆಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ನಗದು ಸೇರಿದಂತೆ 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರ ರಾಜ್ಯದ ರಾಮ್‍ಕುಮಾರ್(20) ಮತ್ತು ಮಧಸೂದನ್ ಪ್ರಸಾದ್ ವರ್ಮ(45) ಬಂಧಿತರು. ಕಾಡುಗೋಡಿ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಿ 230 ಗ್ರಾಂ ತೂಕದ ಚಿನ್ನದ ಒಡವೆಗಳು, 200 ಗ್ರಾಂ ಬೆಳ್ಳಿ ಸಾಮಾನುಗಳು, […]