ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲ : ಜಪಾನ್ ಪ್ರಧಾನಿ

ವಿಶ್ವಸಂಸ್ಥೆ,ಸೆ.21- ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ತಡೆಯುವಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವೈಫಲ್ಯವಿದೆ ಎಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಗತಿಕ ಶಾಂತಿ ಮತ್ತು ಸುವ್ಯವಸ್ಥೆ ಸಂರಕ್ಷಿಸಲು ವಿಶ್ವಸಂಸ್ಥೆ ಕೂಡಲೆ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ. ವಿಶ್ವ ಶಾಂತಿಯನ್ನು ಕಾಪಾಡುವಲ್ಲಿ ವಿಶ್ವಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ಅಂತರರಾಷ್ಟ್ರೀಯ ಕ್ರಮದ ಅಡಿಪಾಯವು ಇದೀಗ ಹಿಂಸಾತ್ಮಕವಾಗಿ ಅಲುಗಾಡುತ್ತಿದೆ ಎಂದು ಕಿಶಿಡಾ ವಿಶ್ವ ನಾಯಕರ ವಾರ್ಷಿಕ ಅದಿವೇಶನದ ಭಾಷಣದಲ್ಲಿ ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ […]