ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ

ಹುಬ್ಬಳ್ಳಿ,ಡಿ.2- ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕನೊಬ್ಬ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರು ಕೊಡಲು ಬಂದಿದ್ದ ಯುವಕನ ಮೆಲೆಯೇ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತನಿಖೆಗೆ ಸೂಚಿಸಿದ್ದೇನೆ. ಒಂದು ವೇಳೆ ಪೊಲೀಸರು ಯುವಕನ ಮೇಲೆ […]

ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು,ಸೆ.20- ಕಳೆದ 2015-16ರಲ್ಲಿ ಅರ್ಜಿ ಸಲ್ಲಿಸದೆ, ಪರೀಕ್ಷೆ ಬರೆಯದೆ, ಅರ್ಹತೆ ಇಲ್ಲದೆ, ಶಿಕ್ಷಕರಾಗಿ ನೇಮಕವಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕರಾದ ಪಿ.ರಾಜೀವ್ ಹಾಗೂ ಎ.ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್ಸೆಸ್ಸೆಲಿ ಮಂಡಳಿಯ ನಿರ್ದೇಶಕರಿಂದ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಬೆಂಗಳೂರು ವಿಭಾಗದಲ್ಲಿ ಗೊತ್ತಾದ ನಂತರ ಸಿಐಡಿಗೆ ವಹಿಸಲಾಗಿದೆ. ಸಿಇಟಿ ಬರೆಯದೆ, ಅರ್ಹತೆ ಬರೆಯದೆ, ಅರ್ಜಿ ಸಲ್ಲಿಸದೆ 16 ಮಂದಿ ಶಿಕ್ಷಕರಾಗಿ […]